CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ದಾಖಲೆ ಪರಿಶೀಲನೆಗೆ ಅವಕಾಶ

ಬೆಂಗಳೂರು: UGCET-25 ತೆಗೆದುಕೊಳ್ಳುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ತಮ್ಮ ಕಾಲೇಜುಗಳಲ್ಲಿ ಪರಿಶೀಲಿಸಿಕೊಳ್ಳಲು ಅವಕಾಶ ಇದೆ. ಈ ವಿಷಯದಲ್ಲಿ ಆತಂಕಪಡುವ ಅಗತ್ಯ ಇಲ್ಲ. ಸಿಇಟಿ ಪರೀಕ್ಷೆಗೆ ಶುಲ್ಕ ಪಾವತಿಸುವ ಎಲ್ಲ ಅಭ್ಯರ್ಥಿಗಳಿಗೂ ಪ್ರವೇಶ ಪತ್ರವನ್ನು ನೀಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಈ ಬಗ್ಗೆ ಮಾಹಿತಿ ನೀಡಿದ್ದು, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕು. ಅಂತಹ ಎಲ್ಲಾ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ನೀಡಲಾಗುವುದು. ದಾಖಲೆಗಳ ಪರಿಶೀಲನೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಂತರವೂ ಅವಕಾಶ ನೀಡಲಾಗುತ್ತದೆ. ಯಾರೂ ಆತಂಕ ಪಡಬಾರದು ಎಂದು ತಿಳಿಸಿದ್ದಾರೆ.

ಸೂಚನೆಗಳು:

ದಾಖಲೆಗಳನ್ನು ಪರಿಶೀಲಿಸಿದ ವಿದ್ಯಾರ್ಥಿಗಳಿಗೆ ಮಾತ್ರ CET-2025 ಪ್ರವೇಶ ಟಿಕೆಟ್ ನೀಡಲಾಗುತ್ತದೆ ಎಂಬ ಗ್ರಹಿಕೆಗೆ ವಿದ್ಯಾರ್ಥಿಗಳು ಒಳಗಾಗಬೇಕಾಗಿಲ್ಲ. ಅರ್ಜಿ ಶುಲ್ಕವನ್ನು ಪಾವತಿಸಿದ ಮತ್ತು CET-2025 ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ CET-2025 ಪರೀಕ್ಷೆಗೆ ಪ್ರವೇಶ ಟಿಕೆಟ್ ನೀಡಲಾಗುತ್ತದೆ.

ವೈದ್ಯಕೀಯ / ದಂತ ವೈದ್ಯಕೀಯ / ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು UGNEET-2025 ಪರೀಕ್ಷೆಯಲ್ಲಿ ಅರ್ಹತೆ ಪಡೆಯಬೇಕು ಆದರೆ ಅವರು KEA ನಲ್ಲಿ ನೋಂದಾಯಿಸಿರಬೇಕು ಮತ್ತು ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಶುಲ್ಕವನ್ನು ಪಾವತಿಸಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read