‘KEA’ ಪರೀಕ್ಷೆ ಅಕ್ರಮ ಪ್ರಕರಣ : ಕಾಂಪೌಂಡ್ ಹಾರಿ ಎಸ್ಕೇಪ್ ಆದ ಕಿಂಗ್ ಪಿನ್ R.D ಪಾಟೀಲ್

ಕಲಬುರಗಿ : ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಪೊಲೀಸರಿಂದ ತಪ್ಪಿಸಿಕೊಂಡಿದ್ದಾನೆ.

ಆರ್ ಡಿ ಪಾಟೀಲ್ ನನ್ನು ಬಂಧಿಸಲು ಹೋದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾನೆ. ಈ ದೃಶ್ಯಗಳು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲಬುರಗಿಯ ಅಪಾರ್ಟ್ಮೆಂಟ್ನಲ್ಲಿಯೇ ಕಿಂಗ್ಪಿನ್ ವಾಸವಿದ್ದನು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ಹೋದಾಗ ಆತ ಕಾಂಪೌಂಡ್ ನಿಂದ ಹಾರಿ ಎಸ್ಕೇಪ್ ಆಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಆರೋಪಿ ಆಸಿಫ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡಲು ಸಹಕರಿಸುತ್ತಿದ್ದನು ಎಂಬುದು ಬಯಲಾಗಿದೆ. ಪ್ರಮುಖ ಆರೋಪಿಯಾದ ಆರ್ ಡಿ ಪಾಟೀಲ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಕಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read