KEA ಪರೀಕ್ಷಾ ಅಕ್ರಮ; ಮತ್ತೋರ್ವ ಆರೋಪಿ ಅರೆಸ್ಟ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗಾಗಿ ನಡೆದಿದ್ದ ಕೆಇಎ ಪರೀಕ್ಷೆಯಲ್ಲಿ ಕೆಲ ಅಭ್ಯರ್ಥಿಗಳು ಬ್ಲುಟೂತ್ ಇಟ್ಟುಕೊಂಡು ಪರೀಕ್ಷೆ ಬರೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಹಲವರನ್ನು ಬಂಧಿಸಲಾಗಿದ್ದು, ಇಂದು ಕಲಬುರ್ಗಿಯ ಅಫಜಲಪುರ ಠಾಣೆಯ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಎಸ್ಕೇಪ್ ಆಗಿದ್ದ ಆರೋಪಿ ಆಸೀಫ್ ಬಂಧಿತ ಆರೋಪಿ. ಅಫಜಲಪುರ ಠಾಣೆಯಲ್ಲಿ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಸೇರಿ 9 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನಕ್ಕೆ ಶೋಧ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read