HomeKarnatakaBIG NEWS: ಕಾಂಪೌಂಡ್ ಹಾರಿ ಎಸ್ಕೇಪ್ ಆದ KEA ಪರೀಕ್ಷಾ ಅಕ್ರಮದ ಕಿಂಗ್ ಪಿನ್; ಗೃಹ...

BIG NEWS: ಕಾಂಪೌಂಡ್ ಹಾರಿ ಎಸ್ಕೇಪ್ ಆದ KEA ಪರೀಕ್ಷಾ ಅಕ್ರಮದ ಕಿಂಗ್ ಪಿನ್; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್, ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಪೊಲೀಸರು ದಾಳಿ ನಡೆಸಿದ್ದ ವೇಳೆ ಕಾಂಪೌಂಡ್ ಹಾರಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆತ ಎಸ್ಕೇಪ್ ಆಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಪರಮೇಶ್ವರ್ ಆತ ತಲೆಮರೆಸಿಕೊಂಡಿದ್ದಾನೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಆರ್.ಡಿ.ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ. ಒಂದು ವೇಳೆ ಪೊಲೀಸ್ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಡಿ.ಪಾಟೀಲ್ ವಿರುದ್ಧ ಸಾಕಷ್ಟು ಕೇಸ್ ಗಳಿವೆ. ಅಗತ್ಯವಿದ್ದರೆ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ. ಮರು ಪರೀಕ್ಷೆ ಬಗ್ಗೆ ಕೆಇಎ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಪ್ರಮುಖ ಆರೋಗಳು ಯಾವುದೇ ಭಯವಿಲ್ಲದೇ ಇರುವುದಕ್ಕೆ ಈ ರೀತಿ ಅಕ್ರಮ ನಡೆಸಿದ್ದಾರೆ. ಇನ್ನುಮುಂದೆ ಹೀಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular