HomeKarnatakaBIG NEWS: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಬಂಧಿಸಲು ನಿರ್ಲಕ್ಷ್ಯ; ಸಿಪಿಐ ಸಸ್ಪೆಂಡ್

BIG NEWS: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಬಂಧಿಸಲು ನಿರ್ಲಕ್ಷ್ಯ; ಸಿಪಿಐ ಸಸ್ಪೆಂಡ್

ಕಲಬುರ್ಗಿ: ಕೆಇಎ ಹಾಗೂ ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿಯನ್ನು ಬಂಧಿಸಲು ನಿರ್ಲಕ್ಷ್ಯ ತೋರಿದ್ದ ಆರೋಪದಲ್ಲಿ ಅಫಜಲಪುರ ಸಿಪಿಐ ಅವರನ್ನು ಅಮಾನತು ಮಾಡಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು ಬಂಧಿಸಲು ನಿರ್ಲಕ್ಷ ತೋರಿದ ಆರೋಪದಲ್ಲಿ ಕಲಬುರ್ಗಿ ಜಿಲ್ಲೆಯ ಅಫಜಲಪುರ ಸಿಪಿಐ ಪಂಡಿತ ಸಗರ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ.6ರಂದು ಕಲಬುರ್ಗಿ ನಗರದ ಅಪಾರ್ಟ್ ಮೆಂಟ್ ನಿಂದ ತಪ್ಪಿಸಿಕೊಂಡು ಆರೋಪಿ ಆರ್.ಡಿ.ಪಾಟೀಲ್ ಪರಾರಿಯಾಗಿದ್ದ. ಈ ಹಿನ್ನೆಲೆಯಲ್ಲಿ ಸಿಪಿಐ ನಿರ್ಲಕ್ಷ ಎಂದು ಪಂಡಿತ ಸಗರ ಅವರನ್ನು ಅಮಾನತು ಮಾಡಿ ಐಜಿಪಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular