HomeLatest NewsBIG NEWS : 'KEA' ಯಿಂದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ, ಇಲ್ಲಿದೆ...

BIG NEWS : ‘KEA’ ಯಿಂದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ.!

ಬೆಂಗಳೂರು : ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ. ತಾಂತ್ರಿಕ ಶಿಕ್ಷಣ, ಬಿಡಿಎ, ಕೃಷಿ ಮಾರಾಟ, ಬೆಂಗಳೂರು ಜಲಮಂಡಳಿ, ಕೆಕೆಆರ್ ಟಿಸಿ ಇತ್ಯಾದಿ ಇಲಾಖೆ/ನಿಗಮ- ಮಂಡಳಿಗಳ ವಿವಿಧ ದರ್ಜೆಯ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

ವಿವಿಧ ಇಲಾಖೆ/ನಿಗಮಗಳಲ್ಲಿನ ಹೈದರಾಬಾದ್ ಕರ್ನಾಟಕ ಕೋಟಾದ 391 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು #KEA ವೇಳಾಪಟ್ಟಿಯನ್ನು ಪ್ರಕಟಿಸಿದೆ. ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ಗೆ ಭೇಟಿ ನೀಡಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular