HomeKarnatakaವೃತ್ತಿಪರ ಕೋರ್ಸ್ ಪ್ರವೇಶ: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ವೃತ್ತಿಪರ ಕೋರ್ಸ್ ಪ್ರವೇಶ: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಈ ಬಗ್ಗೆ ಮಾಹಿತಿ ನೀಡಿದ್ದು,  ಆಗಸ್ಟ್ 27ರಂದು ಬೆಳಗ್ಗೆ 11 ಗಂಟೆಯವರೆಗೆ ಅಭ್ಯರ್ಥಿಗಳು ಕಾಲೇಜು ಮತ್ತು ಕೋರ್ಸ್ ಗಳನ್ನು ಬದಲಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ನಿಗದಿಯಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆಪ್ಟೆಂಬರ್ 1 ರಂದು ಪ್ರಕಟಿಸಲಾಗುವುದು. ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗಮನಿಸುವಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular