ನರ್ಸಿಂಗ್ ಕೋರ್ಸ್ ಸೇರಬಯಸುವವರಿಗೆ ಕೆಇಎ ಮುಖ್ಯ ಮಾಹಿತಿ: ನ. 17 ರಿಂದ ದಾಖಲೆ ಪರಿಶೀಲನೆ

ಬೆಂಗಳೂರು: ವಿವಿಧ ನರ್ಸಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನವೆಂಬರ್ 17, 18 ಮತ್ತು 20ರಂದು ನಡೆಯಲಿದೆ.

ರಾಜ್ಯದ 11 ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಾಖಲಾತಿ ಪರಿಶೀಲನೆ ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ, ಮಂಡ್ಯ, ಬೆಳಗಾವಿ, ಬಳ್ಳಾರಿ, ಬೀದರ್, ಹುಬ್ಬಳ್ಳಿ, ಕಲಬುರಗಿ, ಹಾಸನ, ಮೈಸೂರು, ಶಿವಮೊಗ್ಗ ಮತ್ತು ಕಾರವಾರಗಳಲ್ಲಿರುವ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯಲಿದೆ,

ವಿವರಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.jar.nic.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read