HomeLatest NewsBIG NEWS : 'KEA' ಯಿಂದ ಇಂಜಿನಿಯರಿಂಗ್ 'ಕರಡು ಸೀಟ್ ಮ್ಯಾಟ್ರಿಕ್ಸ್' ಪ್ರಕಟ : ವಿದ್ಯಾರ್ಥಿಗಳಿಗೆ...

BIG NEWS : ‘KEA’ ಯಿಂದ ಇಂಜಿನಿಯರಿಂಗ್ ‘ಕರಡು ಸೀಟ್ ಮ್ಯಾಟ್ರಿಕ್ಸ್’ ಪ್ರಕಟ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ.!

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ / ವಿಶ್ವವಿದ್ಯಾಲಯಗಳಲ್ಲಿ ಹೊಸ ಕೋರ್ಸುಗಳ ಪ್ರಾರಂಭ ಹಾಗೂ ಪ್ರವೇಶಾತಿ ಹೆಚ್ಚಳಕ್ಕೆ ನಿಯಮಾನುಸಾರ ಸರ್ಕಾರದಿಂದ ಅನುಮೋದನೆ / ನಿರಾಕ್ಷೇಪಣಾ ಪ್ರಮಾಣ ಪತ್ರಗಳನ್ನು ನೀಡಿರುವ ಕೋರ್ಸುಗಳನ್ನು ಅಳವಡಿಸಿ ಸಿದ್ಧಪಡಿಸಿರುವ ಕರಡು ಸೀಟ್ ಮ್ಯಾಟ್ರಿಕ್ಸ್ ಅನ್ನು #KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಸದರಿ ಕರಡು ಸೀಟ್ ಮ್ಯಾಟ್ರಿಕ್ಸ್ ನಲ್ಲಿ ಲೋಪದೋಷವಿದ್ದಲ್ಲಿ ಅಥವಾ ಆಕ್ಷೇಪಣೆ, ಸಲಹೆಗಳಿದ್ದಲ್ಲಿ ಸಾರ್ವಜನಿಕರು / ಶಿಕ್ಷಣ ಸಂಸ್ಥೆಗಳು ನೇರವಾಗಿ ಸರ್ಕಾರದ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, 3ನೇ ಗೇಟ್, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು ಇಲ್ಲಿಗೆ ಲಿಖಿತವಾಗಿ ಅಥವಾ ಇ-ಮೇಲ್ [email protected] ಗೆ 7 ದಿನಗಳೊಳಗಾಗಿ ಸಲ್ಲಿಸುವಂತೆ ಕೋರಲಾಗಿದೆ.

ಅವಧಿ ಮುಗಿದ ನಂತರ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ /ಸಲಹೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು #KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. 2025-26ನೇ ಸಾಲಿಗೆ ರಾಜ್ಯದ ಸರ್ಕಾರಿ / ಅನುದಾನಿತ / ಅನುದಾನ ರಹಿತ ಇಂಜಿನಿಯರಿಂಗ್ ಕಾಲೇಜುಗಳು / ಸರ್ಕಾರಿ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳಲ್ಲಿನ ಎಂಜಿನಿಯರಿಂಗ್ ಸ್ನಾತಕ ಕೋರ್ಸುಗಳಿಗೆ ಎಐಸಿಟಿಇ ಇವರಿಂದ ಪ್ರವೇಶಾತಿ ಅನುಮೋದನೆಯನ್ನು ನೀಡಿರುವ ಕಾಲೇಜುಗಳನ್ನು ಸೀಟ್ ಮ್ಯಾಟ್ರಿಕ್ಸ್ ನಲ್ಲಿ ಪರಿಗಣಿಸಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ. 2025-26ನೇ ಶೈಕ್ಷಣಿಕ ಸಾಲಿನಲ್ಲಿ ವ್ಯತ್ತಿಪರ ಇಂಜಿನಿಯರಿಂಗ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಎಐಸಿಟಿಇ ಅನುಮೋದನೆ ನೀಡಿರುವ ಕೋರ್ಸುಗಳಿಗೆ ಸಂಬಂಧಿಸಿದಂತೆ ಹೊಸ ಕೋರ್ಸುಗಳ ಪ್ರಾರಂಭ ಹಾಗೂ ಪ್ರವೇಶಾತಿ ಸಂಖ್ಯೆ ಹೆಚ್ಚಳಕ್ಕೆ ಸರ್ಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ (NOC) ಪಡೆಯದ ಸಂಸ್ಥೆ/ಕಾಲೇಜುಗಳ ಕೋರ್ಸುಗಳನ್ನು ಕೈಬಿಡಲಾಗಿರುತ್ತದೆ. ಅಂತಹ ಕೋರ್ಸುಗಳಿಗೆ ಸರ್ಕಾರದಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ (NOC) ಪಡೆದು, ಅದನ್ನು ಸಲ್ಲಿಸಿದಲ್ಲಿ ಅಂತಹ ಕಾಲೇಜುಗಳ ಕೋರ್ಸುಗಳನ್ನು ಅಂತಿಮ ಸೀಟ್ ಮ್ಯಾಟ್ರಿಕ್ಸ್ ನಲ್ಲಿ ಪರಿಗಣಿಸಲು ಕ್ರಮವಹಿಸಲಾಗುವುದು ಎಂದೂ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular