KEA ಮೂಲಕ 650 ಸಹಾಯಕ ಪ್ರಾಧ್ಯಾಪಕರು, 1,200 ನರ್ಸ್ ಗಳ ನೇಮಕಾತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಮೂಲಕ ವೈದ್ಯಕೀಯ ಶಿಕ್ಷಣ ಇಲಾಖೆಯ ಗ್ರೂಪ್ ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ ಗಳನ್ನು ಶೀಘ್ರವೇ ನೇಮಕಾತಿ ಮಾಡಿಕೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಸಹಾಯಕ ಪ್ರಾಧ್ಯಾಪಕರು, ನರ್ಸ್ ಗಳ ನೇಮಕಾತಿ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read