HomeKarnatakaವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಜುಲೈ 13 ಮತ್ತು 14 ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಿದ್ದು, ತಾತ್ಕಾಲಿಕ ಅಂಕಪಟ್ಟಿಯನ್ನು ಗುರುವಾರ ಕೆಇಎ ಪ್ರಕಟಿಸಿದೆ. ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿ, ಪರಿಷ್ಕೃತ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಆ ಪ್ರಕಾರ ಅಂಕಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 3ರಂದು ಸಂಜೆ 5:30 ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular