HomeKarnatakaBIG NEWS: ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

BIG NEWS: ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ವ ತಯಾರಿ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆ ಬದಲಿಸಿಕೊಳ್ಳಲು, ತೆಗೆದುಹಾಕಲು, ಕ್ರಮಾಂಕ ಬದಲಾವಣೆ ಮಾಡಿಕೊಳ್ಳಲು ಇದುವರೆಗೆ ನೀಡಿದ ಅವಕಾಶವನ್ನು ಶುಕ್ರವಾರ ಕೊನೆಗೊಳಿಸಲಾಗಿದೆ.

ಆಪ್ಷನ್ ಬದಲಾವಣೆಗಾಗಿ ತೆರೆದಿದ್ದ ಪೋರ್ಟಲ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಥಗಿತಗೊಳಿಸಿದೆ. ಇನ್ನು ಯಾವ ಬದಲಾವಣೆಗೂ ಅವಕಾಶ ಇರುವುದಿಲ್ಲ. ಈ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಪೂರ್ವ ತಯಾರಿ ಆರಂಭಿಸಿದಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular