HomeKarnatakaಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ: ಆ.25ರಿಂದ ಕಾಲೇಜಿಗೆ ವರದಿ ಮಾಡಿಕೊಳ್ಳಿ

ಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ: ಆ.25ರಿಂದ ಕಾಲೇಜಿಗೆ ವರದಿ ಮಾಡಿಕೊಳ್ಳಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಎಂಜಿನಿಯರಿಂಗ್ ಸೇರಿದಂತೆ ಇತರ ಯುಜಿ ಸಿಇಟಿ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ.

ಸಿಇಟಿ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆಗೆ ಆ.25ರಿಂದ 28ರವರೆಗೆ ಸಮಯ ನಿಗದಿ ಮಾಡಲಾಗಿದೆ. ಈ ಅವಧಿಯಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಿ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು.

ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ. ಎಸ್ ಸಿ. (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಇಷ್ಟ ಇದ್ದರೆ ಚಾಯ್ಸ್- 1 ಆಯ್ಕೆ ಮಾಡಿಕೊಂಡು ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು ಅಥವಾ ಸಿಕ್ಕಿರುವ ಸೀಟು ಇಷ್ಟ ಇಲ್ಲ ಎನ್ನುವವರು ಚಾಯ್ಸ್- 4 ಆಯ್ಕೆ ಮಾಡಿಕೊಂಡು ಕೌನ್ಸೆಲಿಂಗ್ ಪ್ರಕ್ರಿಯೆಯಿಂದ ಹೊರ ಹೋಗಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

UGNEET-26: MCC ಅಲ್ಲದೆ ಇತರ ರಾಜ್ಯಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಸೀಟು ಪಡೆದಿರುವ ಅಭ್ಯರ್ಥಿಗಳಿಗೆ ಕೆಇಎ ಕೌನ್ಸೆಲಿಂಗ್ ನಿಂದ ಉಚಿತವಾಗಿ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಅಂತಹವರಿಂದ ತೆರವಾಗುವ ಸೀಟುಗಳನ್ನೂ ಸೇರಿಸಿಕೊಂಡು ಮತ್ತೊಮ್ಮೆ ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ.

ವೈದ್ಯಕೀಯ ಕೋರ್ಸ್ ಗಳ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಕೆಲವು ಅಭ್ಯರ್ಥಿಗಳು KEA ನಲ್ಲೂ ಹಾಗೂ MCC ನಡೆಸುವ ಕೌನ್ಸೆಲಿಂಗ್ ನಲ್ಲೂ ಸೀಟು ಪಡೆದಿದ್ದು, ಅಂತಹವರು ಇಚ್ಛಿಸಿದಲ್ಲಿ ಚಾಯ್ಸ್-4 ಆಯ್ಕೆ ಮಾಡಿಕೊಂಡು ಕೆಇಎ ಕೌನ್ಸೆಲಿಂಗ್ ನಿಂದ ಉಚಿತವಾಗಿ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ.

ಆ.25 ಮತ್ತು 26ರಂದು ನಿರ್ಗಮಿಸುವುದಕ್ಕೆ ಸಮಯ ನೀಡಿದ್ದು, ಇದರಿಂದ ಮೊದಲ ಸುತ್ತಿನಲ್ಲಿ ಮೆರಿಟ್ ಅಭ್ಯರ್ಥಿಗಳಿಗೂ ಇಚ್ಛೆಯನುಸಾರ ಸೀಟು ಲಭ್ಯವಾದಂತಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

https://twitter.com/KEA_karnataka/status/2091911185000276292

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular