HomeKarnatakaಯುಜಿ -ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ

ಯುಜಿ -ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ

ಬೆಂಗಳೂರು: ಯುಜಿ ಸಿಇಟಿ -2024 ದಾಖಲೆಗಳನ್ನು ಆನ್ಲೈನ್ ಮೂಲಕ ಪರಿಶೀಲಿಸುವ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ.

ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ ಮಾತ್ರ ಪರಿಗಣಿಸಲಾಗಿರುತ್ತದೆ.

ಯುಜಿಸಿಇಟಿ-2024 ಕೈ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ SATS ಸಂಖ್ಯೆಯನ್ನು ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಮತ್ತು ಆರ್.ಡಿ. ಸಂಖ್ಯೆ ಆಧರಿಸಿ ಮೀಸಲಾತಿ[ಎಸ್.ಸಿ., ಎಸ್.ಟಿ. ಪ್ರವರ್ಗ -1, 2ಎ, 2ಬಿ, 3ಎ, 3ಬಿ) 371(ಜೆ,), ಧಾರ್ಮಿಕ ಅಲ್ಪಸಂಖ್ಯಾತ, ಎನ್‌ಸಿಎಲ್‌ಸಿ ಮತ್ತು ಇತರೆ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವಿಸ್ ಮೂಲಕ ಪರಿಶೀಲನೆ ಮಾಡಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹತಾ ಕಂಡಿಕೆ ಇ, ಎಫ್. ಜಿ, ಹೆಚ್, ಮತತ್ಉ ಒ ಕ್ಲಾಸ್ ಗಳಿಗೆ ಅನ್ಯಿಸುವಂತೆ ಆಯಾ ಇಲಾಖೆಯವರು ಪರಿಶೀಲಿಸಿ ನೀಡಿದಂತೆ ಆರ್ಹತೆಯನ್ನು ಪರಿಗಣಿಸಲಾಗಿದೆ.

ಈ ಮೇಲಿನ ಕ್ರಮ ಸಂಖ್ಯೆ 2 ಮತ್ತು 3 ರಂತೆ ಪರಿಶೀಲಿಸಿದ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನ ಲಿಂಕ್‌ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ: ನಮೂದಿಸಿ, ಪರಿಶೀಲಿಸಿದ ವಿವರಗಳನ್ನು ನೋಡಬಹುದಾಗಿದೆ. ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಲಿಂಕ್ ಅನ್ನು ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಸದ್ಯದಲ್ಲಿಯೇ ನೀಡಲಾಗುವುದು.

ಮುಂದಿನ ಹಂತಗಳು:

ಪ್ರಕಟಿಸಲಾಗುವ ವೇಳಾಪಟ್ಟಿಯನುಸಾರ ವೆರಿಫಿಕೇಶನ್ ಸ್ಲಿಪ್ ಡೌನ್ ಲೋಡ್ ಮಾಡಿಕೊಳ್ಳುವುದು; ಆದ್ಯತಾ ಕ್ರಮದಲ್ಲಿ ಆಸಕ್ತಿ ಇರುವ ಕಾಲೇಜು ಮತ್ತು ಕೋರ್ಸುಗಳ ಪಟ್ಟಿಯನ್ನು ಸಿದ್ದಪಡಿಸಿಟ್ಟುಕೊಳ್ಳುವುದು; ಮೊದಲನೇ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದ ನಂತರ ಪ್ರಾಧಿಕಾರದ ವೆಬ್‌ಸೈಟಿನ ಲಿಂಕ್‌ನಲ್ಲಿ Options ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸುವುದು.

ಗಮನಿಸಿ: ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಮ್, ಎನ್, ಜೆಡ್ ಗಳನ್ನು ನಮೂದಿಸಿರುವ ಅಭ್ಯರ್ಥಿಗಳಿಗೆ ಆಫ್‌ಲೈನ್ ಪರಿಶೀಲನೆಗೆ ಹಾಜರಾಗಲು ಪ್ರತ್ಯೇಕ ವೇಳಾಪಟ್ಟಿಯನ್ನು ನೀಡಿ ಪರಿಶೀಲನೆ ಮಾಡಲಾಗಿರುತ್ತದೆ ಮತ್ತು ಅರ್ಹ ಅಭ್ಯರ್ಥಿಗಳಿಗೆ ವೆರಿಫಿಕೇಶನ್ ಸ್ಲಿಪ್ ನೀಡಲಾಗಿದೆ. ಈ ಅಭ್ಯರ್ಥಿಗಳು ಮೇಲಿನ ಲಿಂಕ್ ಅನ್ನು ಪರಿಶೀಲಿಸಬೇಕಾಗಿಲ್ಲ ಮತ್ತು ಆಫ್‌ಲೈನ್ ಪರಿಶೀಲನೆಗೆ ಗೈರು ಹಾಜರಾಗಿರುವ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಅರ್ಹತೆ ಪಡೆಯುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular