HomeLatest NewsBIG NEWS: ಕೇದಾರನಾಥ ಮಾರ್ಗದಲ್ಲಿ ಭೀಕರ ಭೂಕುಸಿತ: ಸಂಚಾರ ಸ್ಥಗಿತ; ರಸ್ತೆ ಮಾರ್ಗ ಸಂಪೂರ್ಣ ಬಂದ್

BIG NEWS: ಕೇದಾರನಾಥ ಮಾರ್ಗದಲ್ಲಿ ಭೀಕರ ಭೂಕುಸಿತ: ಸಂಚಾರ ಸ್ಥಗಿತ; ರಸ್ತೆ ಮಾರ್ಗ ಸಂಪೂರ್ಣ ಬಂದ್

ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇದಾರನಾಥದ ಗೌರಿಕುಂಡ ಬಳಿ ಭೂಕುಸಿತ ಸಂಭವಿಸಿದೆ.

ಭೂಕುಸಿತದಿಂದಾಗಿ ಗೌರಿಕುಂಡದ ಬಳಿ ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಯಾತ್ರಾರ್ಥಿಗಳು ಅರ್ಧದಲ್ಲೇ ಯಾತ್ರೆ ಸ್ಥಗಿತಗೊಳಿಸಿ ಸುರಕ್ಷಿತ ಪ್ರದೇಶಕ್ಕೆ ವಾಪಸ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಡಿ.ಆರ್.ಎಫ್, ಎನ್.ಡಿ.ಆರ್.ಎಫ್ ತಂಡಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಭೂಕುಸಿತ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಸಂಚಾರಾಕ್ಕೆ ಅನುವು ಮಾಡಿಕೊಟ್ಟ ಬಳಿಕ ಯಾತ್ರೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆದಾರನಾಥ, ಗೌರಿಕುಂಡ ಸೇರಿದಂತೆ ಉತ್ತರಾಅಖಂಡದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular