HomeKarnatakaಕೇದಾರನಾಥ ದೇಗುಲದ ಮಾಜಿ ಪ್ರಧಾನ ಅರ್ಚಕ ಗುರುಲಿಂಗಯ್ಯ ಲಿಂಗೈಕ್ಯ

ಕೇದಾರನಾಥ ದೇಗುಲದ ಮಾಜಿ ಪ್ರಧಾನ ಅರ್ಚಕ ಗುರುಲಿಂಗಯ್ಯ ಲಿಂಗೈಕ್ಯ

ಬೆಂಗಳೂರು: ಹಿಮಾಲಯದ ಪವಿತ್ರ ಕೇದಾರನಾಥ ಕ್ಷೇತ್ರದ ಮಾಜಿ ಪ್ರಧಾನ ಅರ್ಚಕ ಗುರುಲಿಂಗಯ್ಯ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ.

ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ಕ್ಷೇತ್ರದಲ್ಲಿ ಗುರುಲಿಂಗಯ್ಯ ಅವರು ಸುದೀರ್ಘ ಕಾಲ ಅರ್ಚಕರಾಗಿದ್ದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವ್ರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾಅರಿಯಾಗದೇ ಸೋಮವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಹಿಮಾಲಯದ ಪುಣ್ಯಕ್ಷೇತ್ರದ ಸನ್ನಿಧಿಯಲ್ಲಿ ದಶಕಗಳ ಕಾಲ ಶಿವನ ಆರಾಧನೆ ಮಾಡಿದ್ದ ಶ್ರೇಷ್ಠ ಅರ್ಚಕರೊಬ್ಬರನ್ನು ಧಾರ್ಮಿಕ ಲೋಕ ಇಂದು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ದೇಶಾದ್ಯಂತ ಇರುವ ಅಪಾರ ಭಕ್ತವೃಂದ ಕಂಬನಿ ಮಿಡಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಜಿಲ್ಲೆಯ ಚಿಕ್ಕ ಬಾಗೇವಾಡಿ ಗ್ರಾಮದವರಾದ ಗುರುಲಿಂಗಯ್ಯ ಅವರ ಕುಟುಂಬವು ಕಳೆದ ಮೂರು ತಲೆಮಾರಿನಿಂದ ಉತ್ತರಾಖಂಡದಲ್ಲೇ ನೆಲೆಸಿದೆ. ಇವರು, ಕೇದಾರಪೀಠದ 322ನೇ ಜಗದ್ಗುರು ರಾವಲ್ ಶಾಂತ ಶಿವಾಚಾರ್ಯ ಭಗವತ್ಪಾದರ ಕಾಲದಲ್ಲಿ ಅರ್ಚಕರಾಗಿ ಸೇವೆಗೆ ಸೇರಿದ್ದರು. 1970 ರಿಂದ ಸುಮಾರು 40 ವರ್ಷಗಳ ಕಾಲ ಕೇದಾರನಾಥೇಶ್ವರನ ಪ್ರಧಾನ ಅರ್ಚಕರಾಗಿ ನಿಷ್ಠೆ ಹಾಗೂ ಭಕ್ತಿಯಿಂದ ಸುದೀರ್ಘ ಸೇವೆ ಸಲ್ಲಿಸಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು.

ಕೇದಾರನಾಥ ಪೀಠದ (ಹಿಮವತ್ ಕೇದಾರ ವೈರಾಗ್ಯ ಪೀಠ) ಸಾಂಪ್ರದಾಯಿಕ ನಿಯಮಗಳ ಪ್ರಕಾರ, ದಕ್ಷಿಣ ಭಾರತದ (ವಿಶೇಷವಾಗಿ ಕರ್ನಾಟಕದ) ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜಂಗಮ ಅರ್ಚಕರೇ ಇಲ್ಲಿ ಪೂಜೆ ಸಲ್ಲಿಸುವ ರಾವಲ್ ಅಥವಾ ಪ್ರಧಾನ ಅರ್ಚಕರಾಗುತ್ತಾರೆ. ಗುರುಲಿಂಗಯ್ಯ ಅವರು ಈ ಪವಿತ್ರ ಪರಂಪರೆಯನ್ನು ಮುನ್ನಡೆಸಿದವರಾಗಿದ್ದಾರೆ.

ಗುರುಲಿಂಗಯ್ಯ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಅವರ ಸ್ವಗ್ರಾಮವಾದ ಬೆಳಗಾವಿಯ ಚಿಕ್ಕ ಬಾಗೇವಾಡಿಗೆ ತರಲಾಗಿದೆ. ಇಂದು ಸಂಜೆ 4 ಗಂಟೆಗೆ ವೀರಶೈವ ಲಿಂಗಾಯತ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಸಕಲ ಗೌರವಗಳೊಂದಿಗೆ ಅವರ ಕ್ರಿಯಾ ಸಮಾಧಿ ನೆರವೇರಲಿದೆ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular