ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ.
ಮಂಗಳವಾರ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವಾರು ಜನರು ಕಾಣೆಯಾಗಿದ್ದಾರೆ. ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್‌ನ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೇದಾರನಾಥ ಯಾತ್ರೆ ಸ್ಥಗಿತಗೊಳಿಸಲಾಗಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಮ್ಮ ಆಂಧ್ರಪ್ರದೇಶ ಭೇಟಿಯನ್ನು ಮೊಟಕುಗೊಳಿಸಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲು ಡೆಹ್ರಾಡೂನ್‌ಗೆ ಮರಳಿದರು. ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ 130 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಮತ್ತು ತಕ್ಷಣದ ಆಹಾರ, ಆಶ್ರಯ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.
#WATCH | Mandi, Himachal Pradesh: Chandigarh- Manali National Highway remains closed due to heavy rainfall and landslides between Mandi and Kullu. pic.twitter.com/vS9pAubVHe
— ANI (@ANI) August 6, 2025
.