HomeEntertainmentರೀಷ್ಮಾ ನಾಣಯ್ಯ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ 'ಕೇಡಿ' ಚಿತ್ರತಂಡ

ರೀಷ್ಮಾ ನಾಣಯ್ಯ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ ‘ಕೇಡಿ’ ಚಿತ್ರತಂಡ

ಇಂದು ನಟಿ ರೀಷ್ಮಾ ನಾಣಯ್ಯ ಹುಟ್ಟುಹಬ್ಬವಾಗಿದ್ದು, ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರೀಷ್ಮಾ ನಾಣಯ್ಯ ಕೆಡಿ ದಿ ಡೆವಿಲ್ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದು, ಚಿತ್ರತಂಡ ಇಂದು  ಅವರ ಪೋಸ್ಟರ್ ಒಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ. ಮಚ್ ಲಕ್ಷ್ಮಿ ಎಂಬ ಪಾತ್ರದಲ್ಲಿ ರೀಷ್ಮಾ ನಾಣಯ್ಯ  ಕಾಣಿಸಿಕೊಳ್ಳಲಿದ್ದಾರೆ.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಈ ಚಿತ್ರವನ್ನು ಪ್ರೇಮ್ ನಿರ್ದೇಶಿಸಿದ್ದು, ರೀಷ್ಮಾ ನಾಣಯ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್, ನೋರಾ ಫತೇಹಿ, ಜಿಶು ಸೆಂಗುಪ್ತ ತೆರೆ ಹಂಚಿಕೊಂಡಿದ್ದಾರೆ. ಕೆ ವಿಎನ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಸುಪ್ರೀತ್ ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ  ನೀಡಿದ್ದಾರೆ. ತ ಶ್ರೀನಿವಾಸ್ ಪಿ ಪ್ರಭು ಸಂಕಲನವಿದೆ. ಈ ಸಿನಿಮಾ ಕನ್ನಡ ಸೇರಿದಂತೆ ತೆಲುಗು, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ.

For Latest News Updates, Join Our Whatsapp Community🚩
RELATED ARTICLES

Most Popular