ಬೆಂಗಳೂರು : ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಹೀಗಂತ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿಕೆಶಿ ಟ್ವೀಟ್ ಕುತೂಹಲ ಮೂಡಿಸಿದೆ. ಡಿಕೆಶಿ ಯಾರಿಗಾದ್ರೂ ಟಾಂಗ್ ಕೊಟ್ರಾ..? ಎಂಬ ಪ್ರಶ್ನೆ ಮೂಡುತ್ತದೆ.
ನಾನು ಅಪ್ಪಟ ಕಾಂಗ್ರೆಸ್ಸಿಗ. ನನ್ನ ಸಂಖ್ಯೆ 140, ಪಕ್ಷ ನನ್ನ ಹಿತ ಕಾಯಲಿದೆ! ಬಿಜೆಪಿ ಹಾಗೂ ಜನತಾದಳದ ನಾಯಕರು ನಮ್ಮ ಪಕ್ಷದ ವಿಚಾರವನ್ನು ಮಾತನಾಡುವ ಅವಶ್ಯಕತೆಯಿಲ್ಲ ಎಂದಿದ್ದಾರೆ.
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ! pic.twitter.com/klregNRUtv
— DK Shivakumar (@DKShivakumar) November 27, 2025
