ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ ‘ಮೋದಿ’ ಕುರಿತ ‘ಕೇಜ್ರಿ’ ಮಾತು….!

ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ತಕ್ಷಣವೇ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಇದರ ಮಧ್ಯೆ ಶನಿವಾರದಂದು ಕೇಜ್ರಿವಾಲ್ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದು, ಈ ಸಂದರ್ಭದಲ್ಲಿ ಅವರು ಹೇಳಿರುವ ಕೆಲವೊಂದು ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅರವಿಂದ ಕೇಜ್ರಿವಾಲ್, ಮುಂದಿನ ವರ್ಷ ನರೇಂದ್ರ ಮೋದಿಯವರಿಗೆ 75 ವರ್ಷವಾಗಲಿದ್ದು, ಒಂದೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ಮೋದಿ ಪ್ರಧಾನಿ ಆದರೆ ಅವರೇ ರೂಪಿಸಿರುವ ನಿಯಮದಂತೆ 75ನೇ ವರ್ಷಕ್ಕೆ ನಿವೃತ್ತಿ ಪಡೆಯಲಿರುವ ಅವರು, ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಬದಿಗೆ ಸರಿಸಿ ಅಮಿತ್ ಶಾ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಹೇಳುವ ಮೂಲಕ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ಅವರ ಮಾತಿನಿಂದ ಉಂಟಾಗಬಹುದಾದ ಗೊಂದಲ ಪರಿಹರಿಸಲು ಬಿಜೆಪಿ ನಾಯಕರು ತಕ್ಷಣವೇ ಪ್ರತಿಕ್ರಿಯೆ ನೀಡಿದ್ದು, ನರೇಂದ್ರ ಮೋದಿಯವರಿಗೆ 75 ವರ್ಷವಾದ ಬಳಿಕವೂ 5 ವರ್ಷಗಳ ಕಾಲ ಅವರೇ ಪ್ರಧಾನಿಯಾಗಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಅಮಿತ್ ಶಾ ಅವರೂ ಕೂಡ ಅರವಿಂದ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ನರೇಂದ್ರ ಮೋದಿಯವರಿಗೆ 75 ವರ್ಷವಾದ ನಂತರ ನೀವು ಖುಷಿ ಪಡಬೇಕಿಲ್ಲ. ಮೋದಿಯವರು ತಮ್ಮ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read