HomeKarnatakaBREAKING: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ: ಶೌಚಾಲಯದಲ್ಲೂ 2...

BREAKING: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂ. ಮೌಲ್ಯದ ಚಿನ್ನ ಜಪ್ತಿ: ಶೌಚಾಲಯದಲ್ಲೂ 2 ಕೆಜಿ ಚಿನ್ನ ಪತ್ತೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

ವಿದೇಶದಿಂದ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮಹಿಳೆಯರಿಬ್ಬರನ್ನು ಬಂಧಿಸಲಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಇಬ್ಬರು ಮಹಿಳೆಯರ ಬಳಿ ಚಿನ್ನ ಪತ್ತೆಯಾಗಿದೆ. ನಾಜಿ ಲೆಟಿ ಎಂಬುವವರಿಂದ 4ಕೆಜಿ 61 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಆರತಿ ಸೆಗಾಲ್ ಎಂಬುವವರಿಂದ 2 ಕೆಜಿ 181 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.

ಅಲ್ಲದೇ, ವಿಮಾನ ನಿಲ್ದಾಣದ ಶೌಚಾಲಯದಲ್ಲಿಯೂ 2 ಕೆಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಬ್ಯಾಂಕಾಕ್ ನಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಮಹಿಳೆಯರ ಬಳಿ ಕಸ್ಟಮ್ ಅಧಿಕಾರಿಗಳಿಂದ ಪರಿಶೀಲನೆ ವೇಳೆ ಬ್ಯಾಗ್ ನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular