HomeLatest NewsBIG NEWS: ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿ; ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಭೀಕರ ಅಪಘಾತ

BIG NEWS: ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿ; ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಭೀಕರ ಅಪಘಾತ

ಬೆಂಗಳೂರು: ಬೆಂಗಳೂರುನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಇದೇ ವೇಳೆ ರನ್ ವೇ ನಲ್ಲಿರುವ ಕಂಬಕ್ಕೆ ಕಾರೊಂದು ಗುದ್ದಿದೆ.

ಇಂಜಿನ್ ರಿಪೇರಿಯಿಂದಾಗಿ ಕೆಟ್ಟು ನಿಂತಿದ್ದ ವಿಮನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಟಿಟಿ ವಾಹನದ ಟಾಪ್ ನುಜ್ಜುಗುಜ್ಜಾಗಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಟಿಟಿ ವಾಹನ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳಿಂದ ಇಂಡಿಗೋ ವಿಮಾನವೊಂದು ಕೆಟ್ಟು ನಿಂತಿತ್ತು. ವಿಮಾನಕ್ಕೆ ಸಿಬ್ಬಂದಿಗಳನ್ನು ಬಿಟ್ಟು ವಾಪಾಸ್ ಆಗುತ್ತಿದ್ದ ಟಿಟಿ ವಾಹನ ಕೆಟ್ಟು ನಿಂತಿದ್ದ ವಿಮಾನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆ ಬಗ್ಗೆ ನಾಗರಿಕ ವಿಮಾನ ಯಾನ ಸಂಸ್ಥೆ ತನಿಖೆಗೆ ಆದೇಶಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular