KIA ಟರ್ಮಿನಲ್-2ರಲ್ಲಿ ಇಂದಿನಿಂದ ಅಂತರಾಷ್ಟ್ರೀಯ ವಿಮಾನ ಹಾರಾಟ ಆರಂಭ

ಬೆಂಗಳೂರು: ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಟರ್ಮಿನಲ್-2 ನಿಂದ ಇಂದಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭವಾಗಲಿದೆ.

ಕೆಂಪೇಗೌಡ ಏರ್ ಪೋರ್ಟ್ ಎಂ.ಡಿ ಹರಿಮಾರನ್ ಇಂದಿನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಿದ್ದಾರೆ. ಇಂದು ಬೆಳಿಗ್ಗೆ 10-45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿಯಲಿದೆ.

ಹಳೆಯ ಟರ್ಮಿನಲ್-1 ದೇಶೀಯ ವಿಮಾನಗಳ ಹಾರಾಟಕ್ಕೆ ಮೀಸಲಿಡಲಾಗುತ್ತಿದೆ. ಟರ್ಮಿನಲ್-2 ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ವಿವಿಧ ಬಗೆಯ ಸಸ್ಯಗಳು ಮತ್ತು ಮರಗಳಿಂದ ಸುತ್ತುವರಿದಿದೆ. ಈ ಟರ್ಮಿನಲ್ ನ್ನು ಇನ್ ದಿ ಗಾರ್ಡನ್ ಎಂದು ಕರೆಯಲಾಗುತ್ತಿದೆ.

ಈ ಟರ್ಮಿನಲ್ ನಲ್ಲಿ 180 ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಸಸ್ಯಗಳು, 3600ಕ್ಕೂ ಹೆಚ್ಚು ಸಸ್ಯ ಪ್ರಭೇದಗಳು, ಬಿದಿರು, 620 ಸ್ಥಳೀಯ ಸಸ್ಯಗಳು, 7,700 ಕಸಿ ಮರಗಳು, 96 ಕಮಲಗಳಿವೆ. 10 ಸಾವಿರ ಚದರ ಮೀಟರ್ ಹಸಿರು ಗೋಡೆ, ಕೃತಕ ವಾಟರ್ ಫಾಲ್ಸ್ ಜೊತೆಗೆ ನೂರಾರು ವರ್ಷಗಳ ಹಳೆಯ ಮರಗಳನ್ನು ಟರ್ಮಿನಲ್ -2 ಹೊಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read