HomeLive Newsಕೇಂದ್ರಿಯ ವಿದ್ಯಾಲಯ : ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ಏ. 13 ರಂದು ನೇರ...

ಕೇಂದ್ರಿಯ ವಿದ್ಯಾಲಯ : ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ಏ. 13 ರಂದು ನೇರ ಸಂದರ್ಶನ

ಚಿತ್ರದುರ್ಗ :   ಚಿತ್ರದುರ್ಗದ ಕೇಂದ್ರಿಯ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಏಪ್ರಿಲ್ 13 ರಂದು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ವಿವಿಧ ವಿಷಯಗಳವಾರು ಪ್ರಾಥಮಿಕ ಶಾಲಾ ಶಿಕ್ಷಕರು, ಕಂಪ್ಯೂಟರ್, ಯೋಗ ಹಾಗೂ ಕ್ರೀಡಾ ತರಬೇತುದಾರರು, ಸಂಗೀತ ಶಿಕ್ಷಕರು, ನರ್ಸ್, ವಿಶೇಷ ಶಿಕ್ಷಕರು ಮತ್ತು ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಸಂದರ್ಶನವು ಇದೇ ಏಪ್ರಿಲ್ 13 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿರುವ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದಲ್ಲಿ ಬೆಳಿಗ್ಗೆ 11:30 ರಿಂದ ಆರಂಭವಾಗುವುದು. ಅಭ್ಯರ್ಥಿಗಳು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯ ಒಳಗಾಗಿ ವರದಿ ಮಾಡಿಕೊಳ್ಳಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಒಂದು ಸೆಟ್ ಸ್ವಯಂ ದೃಢೀಕೃತ ಛಾಯಾಪ್ರತಿಗಳು, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ಕಡ್ಡಾಯವಾಗಿ ಅಧಿಕೃತ ಪೋರ್ಟಲ್ https://samvida-sathi.kvs.gov.in/ ನಲ್ಲಿ ನೋಂದಾಯಿಸಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೈಕ್ಷಣಿಕ ಅರ್ಹತೆಗಳು ಕೇಂದ್ರಿಯ ವಿದ್ಯಾಲಯದ ನಿಯಮಾವಳಿಗಳ ಪ್ರಕಾರ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿದ್ಯಾಲಯದ ನೋಟಿಸ್ ಬೋರ್ಡ್ ಅಥವಾ ಅಧಿಕೃತ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular