ನೈರೋಬಿ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡು ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರವಾಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಿನ್ಯಾದಲ್ಲಿ ಈ ದುರಂತ ಸಂಭವಿಸಿದೆ. ಡಯಾನಿಯಿಂದ ಕಿಚ್ವಾಟೆಂಬೊಗೆ 12 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಏಕಾಏಕಿ ಪತನಗೊಂಡಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರವಾಸಿಗರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಕಿನ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ ಮಾಹಿತಿ ನೀಡಿದೆ.
ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ವಿಮಾನ ದುರಂತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
