BIG NEWS: ಕೆರಗೋಡು ಧ್ವಜ ವಿವಾದ; ವಿಧಾನಸಭೆಯಲ್ಲಿ ಪ್ರತಿಧ್ವನಿ; ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲ ಕೋಲಾಹಲ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಧ್ವಜ ವಿವಾದ ಪ್ರಕರಣ ವಿಧಾನಸಭೆ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕೆರಗೋಡು ಗ್ರಾಮದಲ್ಲಿ ಹನುಮಧ್ವಜವನ್ನು ಪೊಲೀಸರ ಮೂಲಕ ಸರ್ಕಾರ ತೆಗೆಸಿದೆ ಎಂದು ಆರೋಪಿಸಿದರು. ಇದಕ್ಕೆ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ರಾಷ್ಟ್ರಧ್ವಜ ಕಿತ್ತುಹಾಕುವ ಹೇಳಿಕೆಯನ್ನು ಕೊಡುತ್ತಿದ್ದೀರಾ. ತಾಲಿಬಾನ್ ಧ್ವಜ ಎಂದು ಹೇಳಿಕೆ ಕೊಟ್ಟಿದ್ದೀರಿ. ಬಿಜೆಪಿಯವರದ್ದು ಸಂವಿಧಾನವಿರೋಧಿ ಹೇಳಿಕೆ ಅಲ್ಲವೇ? ಎಂದು ಪ್ರಶ್ನಿಸಿದರು. ಈ ವೇಳೆ ಶಾಸಕಿ ನಯನಾ ಮೋಟಮ್ಮ ಬಿಜೆಪಿಯವರು ಹನುಮ ಧ್ವಜ ಬೇಕಾ? ರಾಷ್ಟ್ರ ಧ್ವಜ ಬೇಕಾ? ಎಂಬುದನ್ನು ಹೇಳಲಿ ಎಂದು ಆಗ್ರಹಿಸಿದರು. ಇದೇ ವೇಳೆ ಕಾಂಗ್ರೆಸ್ ಶಾಸಕ ರವಿ ಗಣಿಗ ರಾಷ್ಟ್ರಧ್ವಜದ ವಿರುದ್ಧ ಬಿಜೆಪಿ ಹೋರಾಟವೇ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ಕೋಲಾಹಲ ನಡೆಯಿಯಿತು.

ಮಧ್ಯಪ್ರವೇಶ ಮಾಡಿದ ಸ್ಪೀಕರ್ ಖಾದರ್ ರಾಷ್ಟ್ರಧ್ವಜಕ್ಕೆ ಯಾರೂ ಅಪಮಾನ ಮಾಡಬಾರದು. ಅವಮಾನ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read