HomeIndiaಕೇರಳ ವಿಧಾನಸಭೆ ಚುನಾವಣೆ; ಕಾಂಗ್ರೆಸ್‌ನಿಂದ ಎಂಪಿಗಳಿಗೂ ಟಿಕೆಟ್?

ಕೇರಳ ವಿಧಾನಸಭೆ ಚುನಾವಣೆ; ಕಾಂಗ್ರೆಸ್‌ನಿಂದ ಎಂಪಿಗಳಿಗೂ ಟಿಕೆಟ್?

ಕೇರಳ ರಾಜ್ಯದ 140 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ದಿನಾಂಕ ಮುಂದಿನ ವಾರ ಘೋಷಣೆಯಾಗಲಿದೆ. ಕಾಂಗ್ರೆಸ್ ಚುನಾವಣೆಗಾಗಿ ತಯಾರಿ ನಡೆಸುತ್ತಿದೆ. ಈ ಬಾರಿ ಎಲ್‌ಡಿಎಫ್‌ ಸೋಲು ಕಾಣಲಿದ್ದು, ಸರ್ಕಾರ ರಚನೆ ಮಾಡುವ ಭರವಸೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಇದೆ.

ಕೇರಳ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ದೆಹಲಿಯಲ್ಲಿ ಮಹತ್ವದ ಸಭೆ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ವಾದ್ರಾ ಸಹ ಪಾಲ್ಗೊಂಡಿದ್ದರು.

ಮಾಹಿತಿಗಳ ಪ್ರಕಾರ ಚುನಾವಣಗೆ 31 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಚುನಾವಣಾ ಆಯೋಗ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ತಕ್ಷಣ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಕ್ಷದ ಮೂಲಗಳ ಮಾಹಿತಿಯಂತೆ ಕಾಂಗ್ರೆಸ್ ಈ ಬಾರಿ ರಾಜ್ಯದಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಿರುವ ಕಾರಣ ಸಂಸತ್ ಸದಸ್ಯರಿಗೂ ಸಹ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶ ನೀಡಲಾಗುತ್ತದೆ.

ಹಾಲಿ ಸಂಸದರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿಯೂ ಇದೆ. ಕೇರಳ ಮೂಲದವರಾದ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಸಂಪೂರ್ಣ ನಿರ್ಣಯ ಕೈಗೊಳ್ಳುತ್ತಿದ್ದಾರೆ.

ಆಯಾ ಕ್ಷೇತ್ರಗಳ ರಾಜಕೀಯ ಲೆಕ್ಕಾಚಾರಗಳನ್ನು ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆಯನ್ನು ಮಾಡಬೇಕು ಎಂದು ಅವರು ಹೇಳಿದ್ದಾರೆ. ಯುಡಿಎಫ್ ಅಧಿಕಾರಕ್ಕೆ ಬರುವ ಬಲವಾದ ಸಾಧ್ಯತೆಗಳಿವೆ ಎಂದು ನಂಬಿರುವ ಅನೇಕ ಸಂಸದರು, ತಾವೂ ಸ್ಪರ್ಧಿಸಲು ಉತ್ಸುಕರಾಗಿದ್ದು, ಟಿಕೆಟ್ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ.

ಹೆಚ್ಚಿನ ಸಂಸದರು ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೊಂದಿದ್ದರೂ, ಆ ಮೂಲಕ ತೆರವಾಗುವ ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳುವ ಕುರಿತು ಪಕ್ಷದೊಳಗೆ ಇನ್ನೂ ಹೆಚ್ಚಿನ ಚರ್ಚೆಗಳು ನಡೆದು, ಅಂತಿಮ ತೀರ್ಮಾನ ಮಾಡಬೇಕಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಮೈತ್ರಿಕೂಟದ ಒಟ್ಟು 234 ಸ್ಥಾನಗಳ ಸಾಧನೆಯಲ್ಲಿ ಗಮನಾರ್ಹ ಕೊಡುಗೆ ನೀಡಿದೆ. ಇದರಲ್ಲಿ, ಕೇರಳದಿಂದ ಯುಡಿಎಫ್ ಮೂಲಕ ಗೆದ್ದಿರುವ 18 ಲೋಕಸಭಾ ಸ್ಥಾನಗಳು ಇವೆ.

ಇದು ಸಂಸತ್ತಿನಲ್ಲಿ ವಿರೋಧ ಪಕ್ಷದ ಶಕ್ತಿಯ ಪ್ರಮುಖ ಆಧಾರಸ್ತಂಭವಾಗಿದೆ. ಆದ್ದರಿಂದ ಅವಧಿಗೂ ಮುನ್ನವೇ ಸಂಸದರು ರಾಜೀನಾಮೆ ನೀಡಿ ಉಪ ಚುನಾವಣೆಯಲ್ಲಿ ಸೋತರೆ ಕೇವಲ ಕೇರಳದಲ್ಲಿ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಹೊಂದಿರುವ ಪ್ರಭಾವದ ಮೇಲೆಯೂ ಗಂಭೀರ ಪರಿಣಾಮ ಬೀರಬಹುದು ಎಂಬ ಗಂಭೀರ ಚರ್ಚೆ ನಡೆಯುತ್ತಿದೆ.

ಕೇರಳದಲ್ಲಿ ಹಾಲಿ 21 ಕಾಂಗ್ರೆಸ್ ಶಾಸಕರು ಇದ್ದಾರೆ. ಕೇಂದ್ರ ಚುನಾವಣಾ ಸಮಿತಿಯು 51 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿತು. ಇವುಗಳ ಪೈಕಿ ಮೊದಲ ಸುತ್ತಿನಲ್ಲಿ 31 ಹೆಸರುಗಳಿಗೆ ಅನುಮೋದನೆ ನೀಡಲಾಗಿದೆ.

ಆದರೆ, ಹಾಲಿ ಸಂಸದರನ್ನು ವಿಧಾನಸಭಾ ಚುನಾವಣಾ ಕಣಕ್ಕಿಳಿಸುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂಬ ಮಾಹಿತಿಯೂ ಸಿಕ್ಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಈ ನಿಯಮಕ್ಕೆ ಯಾವುದೇ ವಿನಾಯಿತಿ ನೀಡುಲಾಗದು ಎಂದು ಪಕ್ಷ ಸ್ಪಷ್ಟಪಡಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular