BIG NEWS: ‘ಒಂದು ದೇಶ ಒಂದು ಚುನಾವಣೆ’ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕಾರ

ನವದೆಹಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಒಂದು ದೇಶ ಒಂದು ಚುನಾವಣೆ ಎಂಬ ಕೇಂದ್ರದ ಉದ್ದೇಶಿತ ಯೋಜನೆ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಮಿತಿ ಶಿಫಾರಸು ಮಾಡಿದ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆ ಅಂಗೀಕರಿಸುವ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ವಿಧಾನಸಭೆ ಒತ್ತಾಯಿಸಿದೆ.

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಜಾಸತ್ತಾತ್ಮಕವಲ್ಲದ ಮತ್ತು ಆಸಂವಿಧಾನಿಕ ನಿರ್ಣಯ ಆಗಿದೆ ಎಂದು ಕೇಂದ್ರದ ವಿರುದ್ಧ ಕೇರಳ ಅಸಮಾಧಾನ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಕೇರಳ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ. ರಾಜೇಶ್ ನಿರ್ಣಯ ಮಂಡಿಸಿದ್ದು, ಈ ಪ್ರಸ್ತಾಪ ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದ ವೈವಿಧ್ಯಮಯ ಸ್ವರೂಪ ಹಾಳು ಮಾಡುತ್ತದೆ ಎಂದು ತಿಳಿಸಿದ್ದಾರೆ.

ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ಸ್ಥಳೀಯ ಪಾಲಿಕೆಗಳ ಅವಧಿ ಕಡಿತಕ್ಕೆ ಇದು ಕಾರಣವಾಗುತ್ತದೆ. ಜನರ ಪ್ರಜಾಪ್ರಭುತ್ವ ಹಕ್ಕುಗಳಿಗೆ ಸವಾಲುಂಟು ಮಾಡುವ ಈ ಪ್ರಸ್ತಾಪ ರಾಜ್ಯಗಳ ಅಧಿಕಾರ ಕಸಿದುಕೊಳ್ಳುತ್ತದೆ. ಚುನಾವಣಾ ವೆಚ್ಚವನ್ನು ಕಡಿಮೆ ಮಾಡಲು, ಆಡಳಿತವನ್ನು ಪರಿಣಾಮಕಾರಿಯಾಗಿ ಮಾಡಲು ಇತರೆ ಸರಳ ಮಾರ್ಗಗಳಿವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read