HomeLatest NewsBIG NEWS: ಸಿಎಂ ಪಿಣರಾಯಿ ವಿಜಯನ್ ನಿವಾಸಕ್ಕೆ ಬಾಂಬ್ ಬೆದರಿಕೆ

BIG NEWS: ಸಿಎಂ ಪಿಣರಾಯಿ ವಿಜಯನ್ ನಿವಾಸಕ್ಕೆ ಬಾಂಬ್ ಬೆದರಿಕೆ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ.

ಸಿಎಂ ಪಿಣರಾಯಿ ವಿಜಯನ್ ಅವರ ಅಧಿಕೃತ ನಿವಾಸ ಕ್ಲಿಪ್ ಪೌಸ್ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಂಪನೂರು ಪೊಲೀಸ್ ಠಾಣೆಗೆ ಇ-ಮೇಲ್ ಮೂಲಕ ಸಂದೇಶ ರವಾನಿಸಿ ಸಿಎಂ ಪಿಡರಾಯಿ ವಿಜಯನ್ ನಿವಾಸದ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ. ತಕ್ಷಣ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಅಲ್ಲದೇ ಇದೊಂದು ಹುಸಿ ಬಾಂಬ್ ಕರೆ ಎಂದು ದೃಧಪಟ್ಟಿದೆ.

ಬಾಂಬ್ ಬೆದರಿಕೆ ಹಾಕಿರುವ ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular