HomeLatest NewsBIG NEWS: ಲೈಂಗಿಕ ಕಿರುಕುಳ: ಕಾಂಗ್ರೆಸ್ ಶಾಸಕ ರಾಹುಲ್ ವಿರುದ್ಧ ಪ್ರಕರಣ ದಾಖಲು

BIG NEWS: ಲೈಂಗಿಕ ಕಿರುಕುಳ: ಕಾಂಗ್ರೆಸ್ ಶಾಸಕ ರಾಹುಲ್ ವಿರುದ್ಧ ಪ್ರಕರಣ ದಾಖಲು

ತಿರುವನಂತಪುರಂ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಕೇರಳದ ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪಾಲಕ್ಕಾಡ್ ಶಾಸಕ ರಾಹುಲ್ ಮಮ್ ಕೂತಥಿಲ್ ವಿರುದ್ಧ ಕೇಸ್ ದಾಖಲಾಗಿದೆ. ಸಂತ್ರಸ್ತ ಮಹಿಳೆಯ ದೂರಿನ ಮೇರೆಗೆ ವಲಿಯಮಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿದ್ದ ದೂರುದಾರೆ ರಾಹುಲ್ ಮಮ್ ಕೂತಥಿಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಬಲವಂತದ ಗರ್ಭಪಾತ ಹಾಗೂ ಜೀವ ಬೆದರಿಕೆ ಸಂಬಂಧಿತ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular