ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 111 ವರ್ಷ ಕಠಿಣ ಶಿಕ್ಷೆ, 1 ಲಕ್ಷ ರೂ. ದಂಡ

ತಿರುವನಂತಪುರಂ: ಐದು ವರ್ಷಗಳ ಹಿಂದೆ ಆಮಿಷವೊಡ್ಡಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನಿಗೆ 111 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.05 ಲಕ್ಷ ರೂಪಾಯಿ ದಂಡ ವಿಧಿಸಿ ಕೇರಳದ ವಿಶೇಷ ತ್ವರಿತ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ದಂಡವನ್ನು ಪಾವತಿಸದಿದ್ದರೆ ಅಪರಾಧಿ ಮನೋಜ್(44) ಹೆಚ್ಚುವರಿ ವರ್ಷ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಅಪ್ರಾಪ್ತ ಬಾಲಕಿಯ ಮೇಲೆ ಪತಿ ದೌರ್ಜನ್ಯ ಎಸಗುತ್ತಿರುವ ವಿಚಾರ ತಿಳಿದ ಮನೋಜ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತೀರ್ಪಿನಲ್ಲಿ, ನ್ಯಾಯಾಧೀಶರಾದ ಆರ್. ರೇಖಾ ಅವರು, ಮಗುವಿನ ಪೋಷಕರಾಗಿದ್ದ ಮನೋಜ್ ಯಾವುದೇ ಕರುಣೆಗೆ ಅರ್ಹವಲ್ಲದ ಅಪರಾಧವನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಘಟನೆ ಜುಲೈ 2, 2019 ರಂದು ಸಂಭವಿಸಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿ ಸರ್ಕಾರಿ ನೌಕರನಾಗಿದ್ದು ತನ್ನ ನಿವಾಸದಲ್ಲಿ ಟ್ಯೂಷನ್ ತರಗತಿಗಳನ್ನು ನಡೆಸುತ್ತಿದ್ದ. ಅವರು ಬಾಲಕಿಯನ್ನು ವಿಶೇಷ ತರಗತಿಗೆ ಕರೆಸಿಕೊಂಡು ಆಕೆಯ ಮೇಲೆ ದೌರ್ಜನ್ಯ ಎಸಗಿದ್ದಲ್ಲದೇ, ತನ್ನ ಮೊಬೈಲ್ ಫೋನ್‌ನಲ್ಲಿ ಫೋಟೋಗಳನ್ನು ತೆಗೆದುಕೊಂಡಿದ್ದ. ಘಟನೆಯ ನಂತರ, ಮಗು ಭಯಗೊಂಡಿತು ಮತ್ತು ಟ್ಯೂಷನ್ ತರಗತಿಗಳಿಗೆ ಹೋಗುವುದನ್ನು ನಿಲ್ಲಿಸಿತ್ತು.

ನಂತರ ಆರೋಪಿಗಳು ಘಟನೆಯ ಫೋಟೋಗಳನ್ನು ಪ್ರಸಾರ ಮಾಡಿದ್ದ. ಘಟನೆ ಬಗ್ಗೆ ತಿಳಿದ ಮಗುವಿನ ಮನೆಯವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಯ ಬಂಧನದ ನಂತರ, ಆತನ ಫೋನ್ ಅನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿತ್ತು.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಆರ್.ಎಸ್. ವಿಜಯ್ ಮೋಹನ್ ಮತ್ತು ಆರ್.ವಿ. ಅಖಿಲೇಶ್ ವಾದ ಮಂಡಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read