BIG NEWS: ಪಟಾಕಿ ಸಂಗ್ರಹ ಘಟಕದಲ್ಲಿ ಸ್ಫೋಟ; ಓರ್ವ ಸಾವು; 16 ಜನರಿಗೆ ಗಂಭೀರ ಗಾಯ

ಕೊಚ್ಚಿ: ಪಟಾಕಿ ಶೇಖರಣಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಚೂರನಾಡ್ ನಲ್ಲಿ ಸಂಭವಿಸಿದೆ.

ಮೃತರನ್ನು ಉಳ್ಳೂರಿನ ವಿಷ್ಣು ಎಂದು ಗುರುತಿಸಲಾಗಿದೆ. ದುರಂತದಲ್ಲಿ 16 ಜನರು ಗಾಯಗೊಂಡಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ಪ್ರಕಾರ ಪಟಾಕಿ ಸಂಗ್ರಹಣಾ ಘಟಕದಲ್ಲಿ ವಾಹನದಿಂದ ಪಟಾಕಿಗಳನ್ನು ಅನ್ ಲೋಡ್ ಮಾಡುತ್ತಿದ್ದಾಗ ಕಾರ್ಟನ್ ಬಾಕ್ಸ್ ನಲ್ಲಿದ್ದ ಪಟಾಕಿ ಏಕಾಏಕಿ ಸ್ಫೋಟಗೊಂಡಿದೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಹಲವು ಮನೆಗಳಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read