ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ!

ಇಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರನಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ.

ಒಂದೇ ಕುಟುಂಬದ ನಾಲ್ವರು ಮನೆಯ ಹಾಲ್ ನಲ್ಲಿಯೇ ನೇಣು ಬಿಗಿದುಕೊಂದು ಸಾವಿಗೆ ಶರಣಾಗಿದ್ದಾರೆ. ಮೃತರನ್ನು ಸಂಜೀವ್ ಮೋಹನನ್ (34), ಪತ್ನಿ ರೇಷ್ಮಾ (30), ಅವರ ಮಕ್ಕಳಾದ ಆರು ವರ್ಷದ ಮಗ ಹಾಗೂ ನಾಲ್ಕು ವರ್ಷದ ಮಗಳು ಎಂದು ತಿಳಿದುಬಂದಿದೆ.

ಸಂಜೀವ್ ಮೋಹನನ್ ಉಪ್ಪುತರಾದ ಪಟ್ಟತಂಬಲಂನ ಆಟೋ ಚಾಲಕರಾಗಿದ್ದರು. ಆರ್ಥಿಕ ಸಮಸ್ಯೆಯಿಂದ ಕಂಗೆಟ್ಟಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತಿ-ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮನೆಯಿಂದ ಯಾರೂ ಹೊರಬರದ ಕಾರಣಕ್ಕೆ ಅನುಮಾನಗೊಂಡು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ನಾಲ್ವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬದ ನಾಲ್ವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read