HomeLatest NewsBREAKING : ಚಿಕ್ಕಮಗಳೂರಿನ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳಂ ಮೂಲದ ಬಾಲಕಿ ಶವವಾಗಿ ಪತ್ತೆ.!

BREAKING : ಚಿಕ್ಕಮಗಳೂರಿನ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳಂ ಮೂಲದ ಬಾಲಕಿ ಶವವಾಗಿ ಪತ್ತೆ.!

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನಾ (15) ಕೊನೆಗೂ ಶವವಾಗಿ ಪತ್ತೆಯಾಗಿದ್ದಾರೆ. ಮಾಣಿಕ್ಯಧಾರಾದ 2000 ಅಡಿ ಕೆಳಗೆ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯವು ದುರಂತ ಅಂತ್ಯ ಕಂಡಿದೆ.

ಹೌದು. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕಳೆದ ನಾಲ್ಕು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಂದನಾ (15) ಕೊನೆಗೂ ಶವವಾಗಿ ಪತ್ತೆಯಾಗಿದ್ದಾರೆ. ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಕ್ಕೆಂದು ಬಂದಿದ್ದಾಗ ಕೇವಲ 10 ನಿಮಿಷಗಳ ಅಂತರದಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಪತ್ತೆಗಾಗಿ ಪೊಲೀಸ್, ಅರಣ್ಯ ಇಲಾಖೆ ಹಾಗೂ SDRF ತಂಡಗಳು ಥರ್ಮಲ್ ಡ್ರೋನ್ ಬಳಸಿ ಬೃಹತ್ ಶೋಧ ಕಾರ್ಯ ನಡೆಸಿದ್ದವು. ಬಾಲಕಿಯ ತಾಯಿ ಇದು ಅಪಹರಣ ಎಂದು ಶಂಕಿಸಿದ್ದ ಬೆನ್ನಲ್ಲೇ ಈಗ ಶವ ಪತ್ತೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಸೃಷ್ಟಿಯಾಗಿವೆ.ಮಾಣಿಕ್ಯಧಾರಾದ 2000 ಅಡಿ ಕೆಳಗೆ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಘಟನೆಯ ಹಿನ್ನೆಲೆ

ಕೇರಳದ ಪಾಲಕ್ಕಾಡ್ ಮೂಲದ ಶ್ರೀನಂದನಾ ತನ್ನ ಕುಟುಂಬದೊಂದಿಗೆ ಬಾಬಾಬುಡನ್‌ಗಿರಿಯ ದತ್ತಪೀಠಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮಾಣಿಕ್ಯಧಾರ ಜಲಪಾತದ ಬಳಿ ಬಯಲು ಪ್ರದೇಶದಂತಿರುವ ಜಾಗದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಬಾಲಕಿ ನಾಪತ್ತೆಯಾಗಿದ್ದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಂಟಿ ಕಾರ್ಯಾಚರಣೆ:

ಬಾಲಕಿಯ ಪತ್ತೆಗಾಗಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಎಸ್‌ಡಿಆರ್‌ಎಫ್ (SDRF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಮಂಜು ಮತ್ತು ಕಡಿದಾದ ಕಂದಕಗಳ ನಡುವೆ ಅತ್ಯಾಧುನಿಕ ಥರ್ಮಲ್ ಡ್ರೋನ್‌ಗಳನ್ನು ಬಳಸಿ ಶೋಧ ನಡೆಸಲಾಗಿತ್ತು. ಕೇರಳದ ಪಾಲಕ್ಕಾಡ್‌ನಿಂದಲೂ ವಿಶೇಷ ಪೊಲೀಸ್ ತಂಡ ಆಗಮಿಸಿ ಸ್ಥಳೀಯ ಪೊಲೀಸರೊಂದಿಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಅಪಹರಣವೋ ಅಥವಾ ಆಕಸ್ಮಿಕವೋ?

ಬಾಲಕಿ ನಾಪತ್ತೆಯಾದ ಸ್ಥಳದಲ್ಲಿ ಎತ್ತರದ ಕಂದಕಗಳಿರುವುದರಿಂದ ಆಕೆ ಪ್ರಪಾತಕ್ಕೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಬಾಲಕಿಯ ತಾಯಿ ತನ್ನ ಮಗಳನ್ನು ಯಾರೋ ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದರು. ಸದ್ಯ ಶವ ಪತ್ತೆಯಾಗಿದ್ದು, ಸಾವಿನ ನಿಜವಾದ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

ತನಿಖೆ ತೀವ್ರಗೊಳಿಸಿದ ಪೊಲೀಸರು:

ಸಿಸಿಟಿವಿ ಪರಿಶೀಲನೆ: ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್‌ಗಿರಿ ಭಾಗದ ಎಲ್ಲಾ ಚೆಕ್-ಪೋಸ್ಟ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಶವ ಪತ್ತೆಯಾದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ತನಿಖಾ ತಂಡಗಳು ಸಾಕ್ಷ್ಯ ಸಂಗ್ರಹಿಸುತ್ತಿವೆ. ಪ್ರವಾಸಕ್ಕೆಂದು ಬಂದು ಹೆತ್ತವರ ಕಣ್ಣೆದುರೇ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆಯಾಗಿರುವುದು ಕುಟುಂಬಸ್ಥರಲ್ಲಿ ಮತ್ತು ಪ್ರವಾಸಿಗರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular