HomeKarnatakaBIG NEWS: ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

BIG NEWS: ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

ಉಡುಪಿ: ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಯ ದರ್ಶನ ಪಡೆದಿದ್ದಾರೆ.

ಕೊಲ್ಲೂರು ದೇವಸ್ಥಾನದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಮೂಕಾಂಬಿಕಾ ದೇವಿ ದರ್ಶನ ಪಡೆದು, ಬಳಿಕ ಉಡುಪಿಗೆ ತೆರಳಿದರು. ಇಂದು ಉಡುಪಿ ಶ್ರೀಕೃಷ್ಣ ಮಠದ ಅಷ್ಠಮಿ ಸಮಾರೋಪ ಸಮಾರಂಭದಲ್ಲಿ ಗವರ್ನರ್ ಆರೀಫ್ ಭಾಗಿಯಾಗಲಿದ್ದಾರೆ.

ಶ್ರೀ ಕೃಷ್ಣ ಮಠಕ್ಕೆ ಭೇಟಿಗೂ ಮುನ್ನ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕ ನರಸಿಂಹ ಹಾಗೂ ಸುಬ್ರಹ್ಮಣ್ಯ ಅಡಿಗ ಅವರು ರಾಜ್ಯಪಾಲ ಆರೀಫ್ ಅವರನ್ನು ಆಸ್ವಗತಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular