HomeIndiaBREAKING NEWS: ಮುಂದುವರಿದ ವರುಣಾರ್ಭಟ: ಕೇರಳದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

BREAKING NEWS: ಮುಂದುವರಿದ ವರುಣಾರ್ಭಟ: ಕೇರಳದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ತಿರುವನಂತಪುರಂ: ಕೇರಳದಲ್ಲಿ ವರುಣಾರ್ಭಟ ಮುಂದುವರೆದಿದ್ದು, ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರಣಮಳೆಯಿಂದಾಗಿ ಕೇರಳದ ವಯನಾಡ್ ಜಿಲ್ಲೆಯ ಮೂರು ಗ್ರಾಮಗಳಲ್ಲಿ ಭೀಕರ ಭೂ ಕುಸಿತ ಸಂಭವಿಸಿ 41ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 150ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದು, ಮಳೆಯ ನಡುವೆಯೇ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಕೇರಳದಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಯಿಕ್ಕೋಡ್, ಮಲಪ್ಪುರಂ, ವಯನಾಡು, ಕಾಸರಗೋದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪತ್ತನಂತಿಟ್ಟ, ಅಲಪ್ಪುಳ, ಕೊಟ್ತಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ನಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular