RAIN ELERT: 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ: ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ತಿರುವನಂತಪುರಂ: ಮುಂದಿನ 24 ಗಂಟೆಗಳಲ್ಲಿ ಕೇರಳದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ 20 ಸೆ.ಮೀಗಿಂತ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕೇರಳದ ಕಾಸರಗೋಡು, ಕಣ್ಣೂರು, ವಯನಾಡ್, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಪಾಲಕ್ಕಾಡ್, ಎರ್ನಾಕುಲಂ, ತ್ರಿಶೂರ್, ಇಡುಕ್ಕಿ, ಕೊಟ್ಟಾಯಂ ಮತ್ತು ಪಥನಾಂತಿಟ್ಟ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಅಲಪ್ಪುಳದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read