ಕೇರಳ ಗುಡ್ಡ ಕುಸಿತ ದುರಂತದಲ್ಲಿ ಚಾಮರಾಜನಗರ ಜಿಲ್ಲೆಯ ನಾಲ್ವರು ಸಾವು

ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತದಲ್ಲಿ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ಜಿಲ್ಲೆಯ ನಾಲ್ವರು ಮೃತಪಟ್ಟಿದ್ದಾರೆ.

ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಪುಟ್ಟಸಿದ್ದಶೆಟ್ಟಿ ಮತ್ತು ರಾಣಿ ಅವರ ಶವವನ್ನು ರಕ್ಷಣಾ ತಂಡ ಹೊರಗೆ ತೆಗೆದಿದೆ.

ತ್ರಯಂಬಕಪುರದ ಸ್ವಾಮಿ ಶೆಟ್ಟಿ ಎಂಬುವರಿಗೆ ಗಾಯಗಳಾಗಿವೆ. ರಾಜೇಂದ್ರ ಮತ್ತು ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇಬ್ಬರ ಮೃತದೇಹಗಳಿಗಾಗಿ ರಕ್ಷಣಾ ತಂಡ ಶೋಧ ಕೈಗೊಂಡಿದೆ. ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ಮೃತರ ಕುಟುಂಬದವರೊಂದಿಗೆ ತಹಶೀಲ್ದಾರ್ ಸಂಪರ್ಕದಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read