ಕೊಟ್ಟಾಯಂ: ಕೇರಳದ ಕೊಟ್ಟಾಯಂ ನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು, ಆಸ್ಪತ್ರೆಯ ಕಟ್ಟಡ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ಬಿಂಧು (52) ಎಂದು ಗುರುತಿಸಲಾಗಿದೆ.
ಅಲೀನಾ (11), ಅಮಲ್ ಪ್ರದೀಪ್ (20), ಜಿನು ಸಾಜಿ (38) ಗಾಯಾಳುಗಳು. ಗಾಯಾಳುಗಳನ್ನು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಾಲಕಿ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದೆ.
ಮೊಮ್ಮಗಳು ಅಲಿನಾ ಅಪಘಾತದಲ್ಲಿ ಗಾಯಗೊಂಡಿದ್ದಕ್ಕೆ ಬಿಂಧು ಅವರು ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಆಸ್ಪತ್ರೆಯ ಕಟ್ಟಡ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಕಟ್ಟಡ ಕುಸಿದು ಎರಡು ಗಂಟೆಗಳ ಬಳಿಕ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದೇ ಮಹಿಳೆ ಸಾವಿಗೆ ಕಾರಣವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.