BIG NEWS: ಡೆಂಗ್ಯೂ ಬೆನ್ನಲ್ಲೇ ನಿಫಾ ವೈರಸ್: 14 ವರ್ಷದ ಬಾಲಕನಿಗೆ ಸೋಂಕು ದೃಢ

ತಿರುವನಂತಪುರಂ: ಡೆಂಗ್ಯು ಅಟ್ಟಹಾಸದ ಬೆನ್ನಲ್ಲೇ ನಿಫಾ ವೈರಸ್ ಆರಂಭವಾಗಿದ್ದು, ಇನ್ನಷ್ಟು ಆತಂಕ ಸೃಷ್ಟಿಸಿದೆ. ಕೇರಳದಲ್ಲಿ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ದೃಢಪಟ್ಟಿದೆ.

ಕೇರಳದ ಮಲಪ್ಪುರಂನಲ್ಲಿ 14 ವರ್ಷದ ಬಾಲಕನಿಗೆ ನಿಫಾ ವೈರಸ್ ಇರುವುದು ಪತ್ತೆಯಾಗಿದೆ. ಮಲಪ್ಪುರಂ ಬಾಲಕನಿಗೆ ನಿಫಾ ಸೋಂಕು ತಗುಲಿರುವುದಾಗಿ ಆರೋಗ್ಯ ಸಚಿವರು ದೃಢಪಡಿಸಿದ್ದಾರೆ. ಬಾಲಕನನ್ನು ಕೊಯಿಕ್ಕೋಡ್ ಆಸ್ಪತೆಗೆ ದಾಖಲಿಸಲಾಗಿದೆ. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಕನ ಮನೆಯವರು ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಬಾಲಕನ ಭೇಟಿಗೆ ಯಾರಿಗೂ ಅವಕಾಶ ನೀಡದೇ ಪ್ರತ್ಯೇಕವಾಗಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬಾವಲಿ ಹಾಗೂ ಹಂದಿಗಳ ದೈಹಿಕ ದ್ರವದ ಮೂಲಕ ನಿಫಾ ವೈರಸ್ ಹರಡುತ್ತದೆ ಮನುಷ್ಯರಿಂದ ಮನುಷ್ಯರಿಗೂ ಹರಡುವ ಉದಾಹರಣೆಗಳಿವೆ.

ಕೇರಳದಲ್ಲಿ ನಿಫಾ ಪತ್ತೆ ಹಿನ್ನೆಲೆಯಲ್ಲಿ ಇದೀಗ ಕರ್ನಾಟಕಕ್ಕೂ ಆತಂಕ ಶುರುವಾಗಿದೆ. ಈಗಾಗಲೇ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 486 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಇದರ ನಡುವೆಯೇ ರಾಜ್ಯಕ್ಕೂ ನಿಫಾ ಆತಂಕ ಎದುರಾಗಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read