ಆತ್ಮಾಹುತಿ ದಾಳಿ ನಡೆಸಿ ಪ್ರಧಾನಿ ಮೋದಿ ಹತ್ಯೆ ಬಗ್ಗೆ ಬೆದರಿಕೆ ಪತ್ರ ಬರೆದ ಕಿಡಿಗೇಡಿ ಅರೆಸ್ಟ್

ಕೊಚ್ಚಿ: ಏಪ್ರಿಲ್ 24 ರಂದು ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಕಳೆದ ವಾರ ಕೇರಳ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್ ಗೆ ಪತ್ರ ಬಂದಿತ್ತು.

ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ. ಸೇತುರಾಮನ್, ಪ್ರಧಾನಿ ವಿರುದ್ಧ ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ನಿನ್ನೆ ಆರೋಪಿ ಕ್ಸೇವಿಯರ್ ನನ್ನು ಬಂಧಿಸಲಾಗಿದೆ. ಕೊಚ್ಚಿಗೆ ಆಗಮಿಸುವ ಪ್ರಧಾನಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇದಕ್ಕಾಗಿ 2060 ಪೊಲೀಸರನ್ನು ನೇಮಿಸಲಾಗಿದೆ. ಇದರ ಭಾಗವಾಗಿ ಮಧ್ಯಾಹ್ನ 2 ಗಂಟೆಯಿಂದ ಸಂಚಾರ ನಿಯಂತ್ರಣವನ್ನೂ ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ರೋಡ್‌ಶೋನಲ್ಲಿ 15,000 ಮತ್ತು ಯುವಂ-23 ಕಾರ್ಯಕ್ರಮಕ್ಕೆ 20,000 ಜನರನ್ನು ನಿರೀಕ್ಷಿಸಲಾಗಿದೆ. ಯುವಂ-23 ನಲ್ಲಿ ಭಾಗವಹಿಸುವವರು ಮೊಬೈಲ್ ಫೋನ್‌ ಗಳನ್ನು ಮಾತ್ರ ತರಬಹುದು ಎಂದು ಆಯುಕ್ತರು ತಿಳಿಸಿದ್ದಾರೆ.

ಏಪ್ರಿಲ್ 25 ರಂದು ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ತಿರುವನಂತಪುರಂ ಸೆಂಟ್ರಲ್ ಸ್ಟೇಷನ್‌ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಕೊಚ್ಚಿ ವಾಟರ್ ಮೆಟ್ರೋವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read