HomeLatest NewsBIG NEWS: ತ್ರಿಶೂರ್ ರೈಲು ನಿಲ್ದಾಣದಲ್ಲಿ ಭೀಕರ ಬೆಂಕಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಸುಟ್ಟು...

BIG NEWS: ತ್ರಿಶೂರ್ ರೈಲು ನಿಲ್ದಾಣದಲ್ಲಿ ಭೀಕರ ಬೆಂಕಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

ತಿರುವನಂತಪುರಂ: ಕೇರಳದ ತ್ರಿಶೂರ್ ನಲ್ಲಿರುವ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.

ತ್ರಿಶೂರ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ಸಂಖ್ಯೆ 2ರ ಬಳಿ ಇರುವ ದ್ವಿಚಕ್ರವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ. 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ತು ಕರಕಲಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ದಟ್ಟ ಹೊಗೆ ಆವರಿಸಿದೆ. ರೈಲು ನಿಲ್ದಾಣದಲ್ಲಿದ್ದ ಪ್ರಯಾಣಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಂದು ಬೆಳಿಗ್ಗೆ 6:45ರ ಸುಮಾರಿಗೆ ಈ ಘಟನೆ ನಡೆದಿದೆ. ಪ್ರತಿ ದಿನ ಇಲ್ಲಿ 500 ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತದೆ. ಇಂದು ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿ ಅವಘಡಕ್ಕೆ ನಿಖರ ಮಾಹಿತಿ ತಿಳಿದುಬಂದಿಲ್ಲ.

ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಧಿಕಾರಿಗಳು ಬೆಂಕಿಗಾಹುತಿಯಾದ ವಾಹನಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ ಅಥವಾ ಇಂಧನ ಸೋರಿಕೆಯಿಂದಾಗಿ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular