HomeIndiaಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್: ಬುರ್ಖಾ ಧರಿಸಿ ಮೊಬೈಲ್ ನಲ್ಲಿ ದೃಶ್ಯ ಸೆರೆ

ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್: ಬುರ್ಖಾ ಧರಿಸಿ ಮೊಬೈಲ್ ನಲ್ಲಿ ದೃಶ್ಯ ಸೆರೆ

ಕೊಚ್ಚಿ: ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಘಟನೆ ನಡೆದಿದೆ. ಟಿಕ್ಕಿಯೊಬ್ಬ ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದಾನೆ.

ಕೊಚ್ಚಿಯಲ್ಲಿರುವ ಲುಲು ಮಾಲ್ ನಲ್ಲಿ ಘಟನೆ ನಡೆದಿದೆ. ಐಟಿ ಉದ್ಯೋಗಿ ಅಭಿಮನ್ಯು(23) ಎಂಬಾತ ಕೃತ್ಯವೆಸಗಿದ್ದಾನೆ. ಬಿ ಟೆಕ್ ಪದವೀಧರನಾಗಿರುವ ಆರೋಪಿ ಐಟಿ ಕಂಪನಿಯ ಉದ್ಯೋಗಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರ ಸೋಗಿನಲ್ಲಿ ಬುರ್ಖಾ ಧರಿಸಿದ್ದ ಆರೋಪಿ ಮಹಿಳೆಯರ ಶೌಚಾಲಯಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹೊರ ಬಂದು ನಿಂತಿದ್ದ ಆರೋಪಿ ಅನುಮಾನಾಸ್ಪದವಾಗಿ ವರ್ತಿಸಿದ್ದಾನೆ. ಆತನನ್ನು ಕಂಡು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಕೊಚ್ಚಿ ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular