ತಿರುವನಂತಪುರಂ: ಆರ್.ಎಸ್.ಎಸ್ ಕಾರ್ಯಕರ್ತನಿಂದ ಲೈಂಗಿಕ ಕಿರುಕುಳ ಆರೋಪ ಮಾಡಿ ಟೆಕ್ಕಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿದೆ.
ಕೇರಳದಕೊಟ್ಟಾಯಂನ ತಂಬಲಕ್ಕಾಡ್ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್ ಆನಂದು ಅಜಿ ಕಳೆದ ವಾರ ಇನ್ ಸ್ಟಾಗ್ರಾಂ ನಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದರು, ಡೆತ್ ನೋಟ್ ನಲ್ಲಿ ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಯಾಂಪ್ ನಲ್ಲಿ ನನಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಎನ್.ಎಂ ಎಂಬುವವರು ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಇದರಿಂದ ತಾನು ಖಿನ್ನತೆಯಿಂದ ಬಳಲಿದ್ದಾಗಿ ಪೋಸ್ಟ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಟೆಕ್ಕಿ ಡೆತ್ ನೋಟ್ ವೈರಲ್ ಆಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಪೊಲೀಸರು ಇದೀಗ ಆರ್.ಎಸ್.ಎಸ್ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಂಪನೂರು ಪೊಲೀಸರು ಕಂಜಿರಪ್ಪಳ್ಳಿ ಮೂಲದ ನಿಧೀಶ್ ಮುರಳಿಧರನ್ ವಿರುದ್ಧ ಸೆಕ್ಷನ್ 377 (ಅಸ್ವಾಭಾವಿಕ ಲೈಂಗಿಕ ಅಪರಾಧ) ಅಡಿಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.