HomeIndiaBIG NEWS: ಕೇರಳ ಬ್ಲಾಸ್ಟ್ ಬಳಿಕ ದೇಶಾದ್ಯಂತ ಹೈ ಅಲರ್ಟ್; ಜನನಿಬಿಡ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ

BIG NEWS: ಕೇರಳ ಬ್ಲಾಸ್ಟ್ ಬಳಿಕ ದೇಶಾದ್ಯಂತ ಹೈ ಅಲರ್ಟ್; ಜನನಿಬಿಡ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ

ನವದೆಹಲಿ: ಕೇರಳದ ಎರ್ನಾಕುಲಂ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೈವಾಡ ಶಂಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದೆ.

ಎರ್ನಾಕುಲಂ ಕನ್ವೆನ್ಷನ್ ಹಾಲ್ ನಲ್ಲಿ ಸಂಭವಿಸಿದ ಸರಣಿ ಸ್ಫೊಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ. 2000ಕ್ಕೂ ಹೆಚ್ಚು ಜನರು ಪ್ರಾರ್ಥನೆಗಾಗಿ ಸೇರಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದ್ದು, ಭಯೋತ್ಪಾದಕ ಕೃತ್ಯವಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೆಹಲಿಯ ಎಲ್ಲಾ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಮಹಾರಾಷ್ಟ್ರ, ಗೋವಾ ಗಡಿ ಪ್ರದೇಶಗಳಲ್ಲಿಯೂ ಖಾಕಿ ಅಲರ್ಟ್ ಆಗಿದೆ. ಆಯಾ ರಾಜ್ಯಗಳ ಗಡಿ ಪ್ರದೇಶಗಳಲ್ಲಿ, ಜನನಿಬಿಡ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular