ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಜೋರಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ನ ಮೂವರು ನಯಕ ನಡುವೆ ತೀವ್ರ ಪೈಪೋಟಿ ನಡೆದಿದೆ.
ಕಾಂಗ್ರೆಸ್ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಸಿಎಂ ಪಟ್ತ ಯಾರಿಗೆ ಒಲಿಯಲಿದೆ? ಎಂಬುದೇ ಕುತೂಹಲವಾಗಿದೆ.
ಮೂವರು ನಾಯಕರ ಪೈಪೋಟಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಈ ಪ್ರಕ್ರಿಯೆಗಾಗಿ ಎಐಸಿಸಿ ವೀಕ್ಷಕರಾದ ಮುಕುಲ್ ವಾಸನಿಕ್ ಮತ್ತು ಅಜಯ್ ಮಾಕೇನ್ ಅವರು ಕೇರಳದ ತಿರುವನಂತಪುರಂನ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. 63 ಕಾಂಗ್ರೆಸ್ ಶಾಸಕರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.
ಆರಂಭಿಕ ಮಾಹಿತಿಗಳ ಪ್ರಕಾರ, ಕೆ.ಸಿ. ವೇಣುಗೋಪಾಲ್ ಅವರಿಗೆ 47 ಶಾಸಕರ, ವಿ.ಡಿ. ಸತೀಶನ್ ಅವರಿಗೆ 35 ಶಾಸಕರ ಮತ್ತು ರಮೇಶ್ ಚೆನ್ನಿತಲ ಅವರಿಗೆ 16 ಶಾಸಕರ ಬೆಂಬಲವಿದೆ ಎಂದು ತಿಳಿದುಬಂದಿದೆ. ಈ ವರದಿಗಳನ್ನು ಆಧರಿಸಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಮೇ 10ರೊಳಗೆ ಕೇರಳದಲ್ಲಿ ಹೊಸ ಕಾಂಗ್ರೆಸ್ ಮುಖ್ಯಮಂತ್ರಿ ಅಧಿಕಾರ ಸ್ವೀಕಾರಿಸಲಿದದರೆ ಎನ್ನಲಾಗಿದೆ.

