HomeIndiaBIG UPDATE: ಕೇರಳದ ತ್ರಿಶೂರ್ ನಲ್ಲಿ ಪಟಾಕಿ ಶೆಡ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ...

BIG UPDATE: ಕೇರಳದ ತ್ರಿಶೂರ್ ನಲ್ಲಿ ಪಟಾಕಿ ಶೆಡ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

ತಿರುವನಂತಪುರಂ: ಕೇರಳದ ತ್ರಿಶೂರ್ ನಲ್ಲಿ ಸಂಭವಿಸಿದ ಪಟಾಕಿ ಶೆಡ್ ಸ್ಫೋತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಮೃತರಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ತ್ರಿಶೂರ್ ಜಿಲ್ಲೆಯ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿಪಟಾಕಿ ಶೆಡ್ ನಲ್ಲಿ ಭೀಕರ ಸ್ಫೋತ ಸಂಭವಿಸಿದೆ. ಈವರೆಗೆ 12 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿರುವಾಂಬಾಡಿ ದೇವಸ್ಥಾನದ ಬಳಿ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಬೆನ್ನಲ್ಲೇ ಪಟಾಕಿಗಳು ನಿರಂತರರಾವಿ ಸ್ಫೋಟಗೊಂಡಿವೆ.

ಘಟನೆಯಲ್ಲಿ 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ ಸಿದ್ಧತೆ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪೂರಂಗಾಗಿ ಪಟಾಕಿ ಸಾಮಗ್ರಿಗಳನ್ನು ಶೆಡ್ ನಲ್ಲಿ ಸಂಗ್ರಹಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ಫೋಟದ ನಿಖರವಾದ ಕಾರಣ ತಿಳಿದುಬಂದಿಲ್ಲ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪಟಾಕಿ ಸ್ಫೋಟದಲ್ಲಿ ಗಾಯಗೊಂಡವರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲು ನಿರ್ದೇಶಿಸಿದ್ದಾರೆ. ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಗಾಯಾಳುಗಳಿಗೆಚಿಕಿತ್ಸೆ ವ್ಯವಸ್ಥೆಗಳನ್ನು ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular