HomeLatest NewsBREAKING: ತ್ರಿಶೂರ್ ನಲ್ಲಿ ಭೀಕರ ದುರಂತ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 6 ಜನರು ದುರ್ಮರಣ

BREAKING: ತ್ರಿಶೂರ್ ನಲ್ಲಿ ಭೀಕರ ದುರಂತ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 6 ಜನರು ದುರ್ಮರಣ

ತಿರುವನಂತಪುರಂ: ರಣ ಬಿಸಿಲ ನಡುವೆ ಸಾಲು ಸಾಲು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣಗಳು ವರದಿಯಾಗುತ್ತಿವೆ. ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ನಡೆದ ಘಟನೆ ಬೆನ್ನಲ್ಲೇ ಕೇರಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದಾರೆ.

ಕೇರಳದ ತ್ರಿಶೂರ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದುದ್ದು, 6 ಜನರು ಮೃತಪಟ್ಟಿದ್ದಾರೆ. 12 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ. ಮಾಹಿತಿ ಪ್ರಕಾರ ಪಟಾಕಿ ಕಾರ್ಖಾನೆಯಲ್ಲಿ 40 ಜನರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದ್ದು, ದುರಂತಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular