ಉಡುಪಿ: ತಮಿಳುನಾಡು ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಬಳಿಕ ಇದೀಗ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಕೇರಳಂ ಮುಖ್ಯಮಂತ್ರಿ ಸತೀಶನ್ ಭೇಟಿ ನೀಡಿದ್ದಾರೆ.
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ.ಸತೀಶನ್ ಇಂದು ಬೆಳಗ್ಗೆ ಭೇಟಿ ನೀಡಿ ಮೂಕಾಂಬಿಕಾ ತಾಯಿಯ ದರ್ಶನ ಪಡೆದರು. ಝಡ್ ಪ್ಲಸ್ ಭದ್ರತೆಯಲ್ಲಿ ದೇವಸ್ಥಾನಕ್ಕೆ ಬಂದಿದ್ದ ಕೇರಳ ಸಿಎಂಗೆ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಗೌರವ ಸಲ್ಲಿಸಲಾಯಿತು.
ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸತೀಶನ್ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇತ್ತೀಚೆಗೆಷ್ಟೇ ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್ ಸಹ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು.

