ತಿರುವನಂತಪುರಂ: ಕೇರಳಂ ವಿಧಾನಸಭೆಯ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚ ಸ್ವೀಕರಿಸುತ್ತಿದ್ದಾರೆ.
ಕೇರಳಂ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿ.ಡಿ.ಸತೀಶನ್ ನೂತಮ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೂತನ ಸಚೊವರಿಗೆ ಖಾತೆ ಹಂಚಿಕೆ ಕೂಡ ಮಾಡಲಾಗಿದೆ.
ಇಂದಿನಿಂದ ಕೇರಳಂ ವಿಧಾನಸಭೆ ಅಧಿವೇಶನ ಆರಂಭವಾಗಿದೆ. ನೂತನ ಶಾಸಕರ ಪ್ರಮಾಣವಚನ ನಡೆಯುತ್ತಿದೆ. ಈ ವೇಳೆ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕೇರಳ ವಿಧಾನಸಭೆಯಲ್ಲಿ ಶಾಸಕ ಅಶ್ರಫ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ.

